History - Book online Pujas, Homam, Sevas, Purohits, Astro services| Pure Prayer
×

Horoscope for

Date of Birth
Time of Birth
Place of Birth
Current Location

  

cart
Top
Image Alt
  • Historical background / ಐತಿಹಾಸಿಕ ಹಿನ್ನೆಲೆ

    Sri Kaveri is the foster daughter of Sri Kavera Maharshi, who had his hermitage in the enchanting valley of “Brahmagiri”, a hillock. Sri Kavera Maharshi had no children. Therefore, he did severe penance to get a child with the blessings of Lord Brahma. Lord Brahma, who was pleased with the penance of Maharshi Kavera, gave his “Manasa putri”- daughter emerging out of the will or mind of Lord Brahma - Lopamudra to him as a mark of special blessing. Lopamudra, who was an incarnation of 'Adi Parashakti', had been handed over to Lord Brahma by Lord Mahavishnu. Lopamudra had prayed to Lord Brahma and got his blessings for her to incarnate as a river and serve the humanity. Lopamudra was brought up by Maharshi Kavera with affection, care and devotion. Accordingly, she was named Kaveri. She was deeply devoted to her father and the ashram duties. As she grew up, she earned the high esteem of all inside and outside the ashram. One day, Agastya Maharshi, who was considered to be an incarnation of Lord Shiva, came from his abode in Himalayas to Kavera Ashram on Brahmagiri hills. He was very much impressed by the charm and chastity of Sri Kaveri. He thought of marrying Sri Kaveri and formally sought her hand. Sri Kaveri agreed for the marriage on one condition that Sri Agastya Maharshi will never leave her alone. Sage Agastya saw through his yogic eye the Divine Mission and greatness of Sri Kaveri. The marriage of Sri Kaveri and Maharshi Agastya was performed at Kavera Ashram with pomp and glory. One day, Sri Agastya Maharshi went for a bath at the source of Kanika River, which was very close to Talakaveri on the other side of Brahmagiri. Before going there, with his yogic power, Sage Agastya converted Sri Kaveri into water and filled it in his 'Kamandalu' (Yogi's handy water pot), kept it near the Brahmakundige at Kavera ashrama. He instructed his disciples to guard the Kamandalu as it contained Kaveri in form of water. The sage failed to turn up early to the hermitage. Sri Kaveri waited for long and due to the prolonged absence of Sage Agastya, she got annoyed. She decided to go in for her divine mission of life of incarnating as a river. Accordingly, Sri Kaveri, by her divine power, jumped out of the Kamandalu and flew into the nearby Brahmakundige - a sacred pond - and emerged as a river. On her way, she was prevented by the 'Nagas' (inhabitants of Nagaloka) at a place called “Nagateertha” and they prayed to Sri Kaveri not to proceed further as a river. Blessing them Sri Kaveri finally came to Bhagamandala, where she was joined by two more rivers called Kannika and Sujyoti. Thus, “Triveni Sangama” was formed and Bhagamandala became a “Sangam Kshetra.' Continuing her course from that point, Sri Kaveri reached Balamuri (Valamburi). Later, Sri Kaveri continued her journey from Balamuri and flew in the States of Karnataka and Tamil Nadu and at last on completion of her river course joined the eastern sea-Bay of Bengal. ಪೂರ್ವಕಾಲದಲ್ಲಿ ಕವೇರನೆಂಬ ಬ್ರಾಹ್ಮಣೋತ್ತಮನು ಬ್ರಹ್ಮಗಿರಿಯಲ್ಲಿ ವಾಸಿಸಿಕೊಂಡಿದ್ದು ತನಗೆ ಸಂತತಿಯಾಗಬೇಕೆಂದು ಬಯಸಿ ಬ್ರಹ್ಮದೇವರನ್ನು ಕುರಿತು ತಪಸ್ಸು ಮಾಡಿದನು. ವಿಪ್ರೋತ್ತಮನ ತಪಸ್ಸಿಗೆ ಒಲಿದು ಬ್ರಹ್ಮದೇವನು ಪ್ರತ್ಯಕ್ಷನಾಗಿ 'ನೀನು ಪೂರ್ವಕಾಲದಲ್ಲಿ ಪುತ್ರಸಂತಾನ ಪ್ರಾಪ್ತಿಯಾಗಲು ಬೇಕಾದ ಧರ್ಮವನ್ನು ಮಾಡಿರುವುದಿಲ್ಲ ಹಾಗಾಗಿ ನಿನಗೆ ಲೋಪಾಮುದ್ರೆಯೆಂಬ ನಾಮಾಂಕಿತವನ್ನೊಳಗೊಂಡ ನನ್ನ ಮಾನಸಪುತ್ರಿಯನ್ನು ಮಗಳಾಗಿ ನೀಡುವೆನು' ಎಂದು ಹೇಳಿ ಕುಮಾರಿಯನ್ನು ಪುತ್ರಿಯಾಗಿ ಸ್ವೀಕರಿಸುವಂತೆ ಆಜ್ಞೆ ನೀಡಿದನು. ಅನುಸಾರವಾಗಿ ಕವೇರನು ಲೋಪಾಮುದ್ರೆಯನ್ನು ಸಂತೋಷದಿಂದ ಸ್ವೀಕರಿಸಿ ಅನೇಕ ವಿಧದಲ್ಲಿ ದಿವ್ಯ ಕುಮಾರಿಯನ್ನು ಸ್ತುತಿಸಿ ಕೊಂಡಾಡಿದನು. ಶ್ರೀ ಲೋಪಾಮುದ್ರಾ ದೇವಿಯು ಕವೇರ ಮುನಿಯನ್ನು ಸಂತೈಸುತ್ತಾ 'ತಂದೆಯೇ! ನಾನು ಲೋಕ ಕಲ್ಯಾಣವನ್ನು ಸಾಧಿಸಲು ನದಿರೂಪವಾಗಿ ಹರಿದು ಸಮುದ್ರವನ್ನು ಸೇರುವೆನು. ಜನರು ನನ್ನನ್ನು ಲೋಕದಲ್ಲಿ ಬ್ರಹ್ಮಪುತ್ರಿಯೆಂದೂ, ಮಾಯೆ ಎಂದೂ, ಕಾವೇರಿ ಎಂದೂ ಕರೆಯುವರು. ಜನರ ಪಾಪಗಳನ್ನು ನಾನು ನಾಶ ಮಾಡುವವಳೆಂದು ಲೋಕಪ್ರಸಿದ್ಧಳಾಗುವೆನು ಎಂದು ಹೇಳಿದಳು. ನಂತರ ಕವೇರ ಮುನಿಯು ಲೋಪಾಮುದ್ರೆಯ ಅನುಗ್ರಹಕ್ಕೆ ಪಾತ್ರನಾಗಿ ದೇಹತ್ಯಾಗ ಮಾಡಿ ತನ್ನ ಸತಿಸಹಿತನಾಗಿ ಬ್ರಹ್ಮಲೋಕವನ್ನು ಸೇರಿದನು. ಶ್ರೀ ಲೋಪಾಮುದ್ರೆಯು ಜಗತ್ಕಲ್ಯಾಣವನ್ನು ಸಾಧಿಸುವ ದೃಷ್ಟಿಯಿಂದ ಶಿವನನ್ನು ಕುರಿತು ಕಠೋರ ತಪಸ್ಸನ್ನು ಆಚರಿಸುತ್ತಾ, ಬ್ರಹ್ಮರ್ಷಿಗಳ ಒಡನೆ ಬ್ರಹ್ಮಗಿರಿಯ ಪವಿತ್ರ ನೆಲೆಯಲ್ಲಿ ವಾಸಿಸುತ್ತಾ ಇದ್ದಳು. ಆ ಸಂದರ್ಭದಲ್ಲಿ ಋಷಿವರ್ಯರಾದ ಅಗಸ್ತ್ಯಮುನಿಗಳು ಉತ್ತರ ಭಾರತದಿಂದ ದಕ್ಷಿಣಾಪಥಕ್ಕೆ ಬಂದವರು ಬ್ರಹ್ಮಗಿರಿಗೆ ಸಂದರ್ಶನವಿತ್ತರು. ಬ್ರಹ್ಮಋಷಿಗಳನೇಕರ ತಪೋಧಾಮವಾದ ಬ್ರಹ್ಮಗಿರಿಯಲ್ಲಿದ್ದ ವಸಿಷ್ಠ ಇತ್ಯಾದಿ ಮಹರ್ಷಿಗಳನ್ನು ಭೇಟಿಮಾಡಿ ಅವರಿಂದ ಆತಿಥ್ಯವನ್ನು ಪಡೆದು ಋಷ್ಯಾಶ್ರಮದ ಮೂಲ ಶಕ್ತಿಯೋ ಎಂಬಂತಿದ್ದ ಶ್ರೀ ಕಾವೇರಿ ದೇವಿಯನ್ನು ಕಂಡು ಹರ್ಷಗೊಂಡರು. ತ್ರಿಕಾಲ ಜ್ಞಾನಿಯೂ, ಮುನಿಪುಂಗವರೂ ಆದ ಅಗಸ್ತ್ಯ ಮಹರ್ಷಿಗಳು ಕಾವೇರಿ ದೇವಿಯ ಜನ್ಮದ ಮೂಲ ಉದ್ದೇಶವನ್ನು ಗ್ರಹಿಸಿಕೊಂಡರು. ಅಗಸ್ತ್ಯ ಋಷಿಗಳು ಶ್ರೀ ಕಾವೇರಿಯನ್ನು ವಿವಾಹವಾಗಲು ಬಯಸಿದರು. ಮಹರ್ಷಿಗಳ ಬಯಕೆಗೆ ಕಾವೇರಿದೇವಿಯು ಒಪ್ಪಿ 'ತನ್ನನ್ನು ಯಾವ ಕಾಲಕ್ಕೂ ಉಪೇಕ್ಷಿಸಿ ಹೊರಟು ಹೋಗಬಾರದೆಂದೂ, ಹೋದರೆ ತಾನು ಸಲಿಲೇಶ್ವರನಾದ ಸಮುದ್ರದೆಡೆಗೆ ನದಿಯಾಗಿ ಹೊರಟು ಹೋಗುತ್ತೇನೆ' ಎಂತಲೂ ಹೇಳಿದಳು. ಶ್ರೀದೇವಿಯು ಹೇಳಿದ ನಿಬಂಧನೆಗೆ ಋಷಿ ಅಗಸ್ತ್ಯರು ಸಮ್ಮತಿಸಿದರು. ಅನುಸಾರವಾಗಿ ಋಷ್ಯಾಶ್ರಮದ ಪವಿತ್ರ ನೆಲೆಯಲ್ಲಿ ದೇವದೇವತೆಗಳ ಸಮ್ಮುಖದಲ್ಲಿ ಶ್ರೀಅಗಸ್ತ್ಯ ಕಾವೇರಿಯರ ಕಲ್ಯಾಣವು ವೇದೋಕ್ತ ರೀತಿಯಲ್ಲಿ ಬಹಳ ವೈಭವದಿಂದ ನಡೆಯಿತು. ನಂತರ ಕೆಲವು ಸಮಯದ ತನಕ ನೂತನ ದಂಪತಿಗಳು ಗೃಹಸ್ತಾಶ್ರಮ ಜೀವನವನ್ನು ಸುಖವಾಗಿ ಸಾಗಿಸುತ್ತಾ ಬಂದರು. ಹೀಗಿರುವಾಗ ಒಂದು ದಿನ ಬ್ರಾಹ್ಮೀಮುಹೂರ್ತದಲ್ಲಿ ಮಹರ್ಷಿ ಅಗಸ್ತ್ಯರು ಬ್ರಹ್ಮಗಿರಿಯ ಉತ್ತರ ತಪ್ಪಲಿನ ಕನಕಾ ನದಿಯ ತೀರಕ್ಕೆ ಸ್ನಾನಕ್ಕೆಂದು ತೆರಳಿದರು. ತೆರಳುವ ಮುನ್ನ ತಮ್ಮ ಪವಿತ್ರ ಕಮಂಡಲದೊಳಗೆ ಶ್ರೀ ಕಾವೇರಿಯನ್ನು ಆವಾಹನೆ ಮಾಡಿ ತಮ್ಮ ಶಿಷ್ಯರಿಗೆಲ್ಲಾ 'ಜಾಗ್ರತೆ ನೋಡಿಕೊಳ್ಳಿ' ಎಂದು ಹೇಳಿ ತೆರಳಿದರು. ಲೋಕಪಾವನೆಯಾಗಿ, ಲೋಕೇಶ್ವರಿಯಾಗಿ, ಲೋಕೋಪಯೋಗಿ ನದಿಯಾಗಿ ಬೆಳಗಬೇಕಾಗಿ ಇಳೆಗೆ ಇಳಿದು ಬಂದ ಮಹಾತಾಯಿ ಕಾವೇರಿ ಇದೇ ಸಂದರ್ಭವನ್ನು ನಿರೀಕ್ಷಿಸುತ್ತಿರಬೇಕು! ತನ್ನ ನಿಬಂಧನೆಯನ್ನು ಪತಿಯಾದ ಅಗಸ್ತ್ಯರು ಉಲ್ಲಂಘಿಸಿದರೆಂದು ಹೇಳಿ ಹೊರಡುವ ಅವಕಾಶ ಒದಗಿ ಬಂತು. ಕಾವೇರಿ ಕೂಡಲೇ ಕಮಂಡಲುವಿನಿಂದ ಹೊರಬಂದು ಪಕ್ಕದ ಬ್ರಹ್ಮಕುಂಡಿಕೆಯನ್ನು ಸೇರಿ ಅಲ್ಲಿಂದ ಜಲರೂಪಳಾಗಿ, ನದಿಯಾಗಿ ಹರಿಯ ಹೊರಟಳು. ಕಾವೇರಿಯು ನದಿಯಾಗಿ ಹರಿದು ಕೆಲವು ಮೈಲುಗಳಷ್ಟು ಮುಂದೆ ತೆರಳಿದಾಗ ನಾಗಲೋಕದವರು ಹಾದಿಗೆ ಅಡ್ಡಲಾಗಿ ಬಂದು ಶ್ರೀಮಾತೆಯನ್ನು ಸ್ತುತಿಸಿ ಮಾತೆಯನ್ನು ನದಿಯಾಗಿ ಹರಿಯದೆ ಉಳಿಯಬೇಕೆಂದು ಪ್ರಾರ್ಥಿಸಿದರು. ಅವರನ್ನು ಸಮಾಧಾನಗೊಳಿಸಿ ಶ್ರೀಕಾವೇರಿಯು ಮುಂದೆ ಸರಿದಳು. ನಾಗಲೋಕದವರು ಶ್ರೀಮಾತೆಯನ್ನು ತಡೆದ ಸ್ಥಳವು ನಾಗತೀರ್ಥವೆಂದು ಪ್ರಸಿದ್ಧವಾಯಿತು. ನಾಗತೀರ್ಥದಿಂದ ಮುಂದೆ ಸಾಗಿದ ಶ್ರ್ರೀಕಾವೇರಿಯು ಭಾಗಮಂಡಲ ಕ್ಷೇತ್ರದಲ್ಲಿ ಕನಕ, ಸುಜ್ಯೋತಿ ನದಿಗಳನ್ನು ಒಡಗೂಡಿಕೊಂಡು ಮುಂದೆ ತೆರಳಿದರು. ಹೀಗೆ ಕೆಲವು ಮೈಲುಗಳು ಸಾಗಿದಾಗ ವಲಂಬುರಿ (ಬಲಮುರಿ) ಎಂಬ ಊರಿಗೆ ತಲುಪಿದಳು. ಬಲಮುರಿಯಿಂದ ಮುಂದೆ ಗುಹ್ಯ-ರಾಮಸ್ವಾಮಿ ಕಣಿವೆ-ಕನ್ನಂಬಾಡಿಗಳನ್ನು ಹಾದು ಪಶ್ಚಿಮವಾಹಿನಿಯಾಗಿ ಶ್ರೀರಂಗಪಟ್ಟಣದ ಹತ್ತಿರ ಹರಿದು ಪುನಃ ಪೂರ್ವಾಭಿಮುಖಿಯಾಗಿ ಸಾಗಿ ಶ್ರೀರಂಗಪಟ್ಟಣವನ್ನು ಸೇರಿದಳು. ಮುಂದಕ್ಕೆ ಸಾಗಿ ತಿರುಮಕೂಡಲು-ತಲಕಾಡು-ಮೆಟ್ಟೂರು-ಶ್ರೀರಂಗಂ-ತಿರುಚಿನಾಪಳ್ಳಿ-ಕುಂಭಕೋಣಂ ಇತ್ಯಾದಿ ಊರುಗಳನ್ನು ಸೇರುತ್ತಾ ಕೊನೆಗೆ ಪೂರ್ವ ಸಮುದ್ರವನ್ನು ಸೇರಿದಳು.

You don't have permission to register